ಜು.21ಕ್ಕೆ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

Prasthutha|

ನವದೆಹಲಿ: ಮೋದಿ ಉಪನಾಮ ಕುರಿತಾದ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ನ ಜುಲೈ 7ರ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

- Advertisement -


ರಾಹುಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಜುಲೈ 21 ಅಥವಾ ಜುಲೈ 24 ರಂದು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬೇಕೆಂದು ಕೋರಿದ್ದರು. ಮನವಿ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಜುಲೈ 21ರಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.


ನ್ಯಾಯಾಲಯದ ತೀರ್ಪಿಗೆ ತಡೆ ನೀಡದಿದ್ದರೆ, ಅದು ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಜುಲೈ 15ರಂದು ಸಲ್ಲಿಸಿದ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿ ಮನವಿ ಮಾಡಿದ್ದರು



Join Whatsapp