Home ಟಾಪ್ ಸುದ್ದಿಗಳು ಸುಪ್ರೀಂ ಕೋರ್ಟ್ ನಲ್ಲಿ ಇಂದು ಸಿದ್ದೀಕ್ ಕಾಪ್ಪನ್ ಅರ್ಜಿ ವಿಚಾರಣೆ

ಸುಪ್ರೀಂ ಕೋರ್ಟ್ ನಲ್ಲಿ ಇಂದು ಸಿದ್ದೀಕ್ ಕಾಪ್ಪನ್ ಅರ್ಜಿ ವಿಚಾರಣೆ

ನವದೆಹಲಿ: ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವರದಿ ಮಾಡಲು ಹತ್ರಾಸ್ ಗೆ ತೆರಳುತ್ತಿದ್ದಾಗ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಉತ್ತರ ಪ್ರದೇಶದ ಪೊಲೀಸರಿಂದ ಬಂಧಿಸಲ್ಪಟ್ಟ ಕೇರಳ ಪತ್ರಕರ್ತ ಸಿದ್ದಿಕ್ ಕಾಪ್ಪನ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರ ನೇತೃತ್ವದ ನ್ಯಾಯಪೀಠವು ಇಂದು ಈ ವಿಷಯವನ್ನು ಕೈಗೆತ್ತಿಕೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್ ವೆಬ್ ಸೈಟಿನಲ್ಲಿ ಪೋಸ್ಟ್ ಮಾಡಲಾದ ಪ್ರಕರಣಗಳ ಕಾರಣ ಪಟ್ಟಿಯ ಪ್ರಕಾರ ತಿಳಿಸಿದೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣ ವರದಿ ಮಾಡಲು ತೆರಳಿದಕ್ಕಾಗಿ ಅಕ್ಟೋಬರ್ 5, 2020 ರಂದು ಉತ್ತರ ಪ್ರದೇಶ ಪೊಲೀಸರಿಂದ ಸಿದ್ದೀಕ್ ಕಾಪ್ಪನ್ ಮತ್ತು ಇತರ ಮೂವರ ಬಂಧನವಾಗಿತ್ತು.

ವಕೀಲ ಹ್ಯಾರಿಸ್ ಬೀರನ್ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠವು ಈ ತಿಂಗಳ ಆರಂಭದಲ್ಲಿ ಆಗಸ್ಟ್ 2 ರಂದು ಕಪ್ಪನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು ಆ ಬಗ್ಗೆ ಕಾಪ್ಪನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

Join Whatsapp
Exit mobile version