ಹೊಸದಿಲ್ಲಿ: ನೋಟು ಬ್ಯಾನ್ ಕುರಿತು ಸೋಮವಾರ(ಜನವರಿ 2)ದಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.
₹500 ಹಾಗೂ ₹1,000 ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಕಟಿಸಲಿದೆ.
ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಲಿದೆ.
2016ರಲ್ಲಿ ಸರ್ಕಾರವು ನೋಟು ಅಮಾನ್ಯೀಕರಣ ಮಾಡುವ ನಿರ್ಧಾರ ಕೈಗೊಂಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ಡಿಸೆಂಬರ್ 7ರಂದು ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ನಿರ್ದೇಶನ ನೀಡಿತ್ತು.