ನವದೆಹಲಿ: ಪ್ರವಾದಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಉಚ್ಚಾಟಿತ ಬಿಜೆಪಿ ನಾಯಕ ನವೀನ್ ಕುಮಾರ್ ಜಿಂದಾಲ್ ವಿರುದ್ಧದ ದೇಶಾದ್ಯಂತ ದಾಖಲಾದ ಎಲ್ಲಾ ಎಫ್ ಐಆರ್ ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.
ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಎಂ.ಎಂ. ಸುಂದ್ರೇಶ್ ಅವರ ಪೀಠವು ಈ ಆದೇಶ ನೀಡಿದ್ದು, ಭವಿಷ್ಯದ ಎಲ್ಲಾ ಎಫ್ಐ ಆರ್ ಗಳನ್ನು ಬಿಟ್ಟು ಬಾಕಿ ಉಳಿದಿರುವ ಪ್ರಕರಣಗಳನ್ನು ಮಾತ್ರ ತನಿಖೆಗಾಗಿ ದೆಹಲಿ ಪೊಲೀಸರಿಗೆ ವರ್ಗಾಯಿಸಲಾಗುವುದು ಎಂದು ಹೇಳಿದೆ.
ದೆಹಲಿ ಪೊಲೀಸರಿಂದ ತನಿಖೆ ಮುಗಿಯುವವರೆಗೂ ಪೀಠವು ಜಿಂದಾಲ್ ಗೆ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಿದೆ. ಅಲ್ಲದೆ ಜಿಂದಾಲ್ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾದ ಎಫ್ಐ ಆರ್ ಗಳನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗೆ ಹೋಗಲೂ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.