ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Prasthutha|

ಮಂಗಳೂರು; ಜಿಲ್ಲೆಯ ವಿಟ್ಲ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ನ ಕೌನ್ಸಿಲರುಗಳ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. 1977ರ ಕರ್ನಾಟಕ ಮುನ್ಸಿಪಾಲಿಟಿ ಕೌನ್ಸಿಲರ್ಗಳ ಚುನಾವಣೆ ನಿಯಮಗಳ 8ನೇ ನಿಯಮದ ಅನುಸಾರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿಟ್ಲ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್ನ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

- Advertisement -


ವಿವರ ಇಂತಿದೆ:
2021ರ ಡಿ.08ರ ಬುಧವಾರ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದೆ. ಡಿ.15 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.16ರ ಗುರುವಾರ ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದೆ. ಡಿ.18ರ ಶನಿವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಡಿ.27ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಮರು ಮತದಾನ ಅವಶ್ಯವಿದ್ದರೆ ಡಿ.29ರ ಬುಧವಾರ ಬೆಳಿಗ್ಗೆ 7 ರಿಂದ ಸಂಜೆ 5ಗಂಟೆಯ ವರೆಗೆ ನಡೆಯಲಿದೆ. ಡಿ.30ರ ಬೆಳಿಗ್ಗೆ 8 ಗಂಟೆಯಿಂದ ತಾಲೂಕಿನ ಕೇಂದ್ರ ಸ್ಥಾನದಲ್ಲಿ ಮತಗಳ ಎಣಿಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಡಿ.30ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Join Whatsapp