ಶಾಲಾ ಅವಧಿಯನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್

Prasthutha|

ತುಮಕೂರು: ಶಾಲಾ ಅವಧಿಯನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಬೇಕು. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು.

- Advertisement -

ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ ‘ಸಿದ್ಧಗಂಗಾ ಶ್ರೀ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ಎರಡನೇ ತರಗತಿವರೆಗೆ ಶಾಲೆಯ ಅವಧಿಯನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು. ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು ಎಂದರು.

- Advertisement -


ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದು ಹೇಳಿದ್ದಾರೆ.



Join Whatsapp