ಬೆಂಗಳೂರು: ರಾಜ್ಯದಲ್ಲಿ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಂಬಂಧ ಇಂದು ಸಂಜೆ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಮೊದಲಿನ ರೀತಿ ಶಾಂತಿ ಸೌಹಾರ್ದತೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.