Home ಟಾಪ್ ಸುದ್ದಿಗಳು ಕೇಸರಿ ಕಿರಿಕ್ | ಶಾಲಾ, ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ: ಬೊಮ್ಮಾಯಿ

ಕೇಸರಿ ಕಿರಿಕ್ | ಶಾಲಾ, ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಂಬಂಧ ಇಂದು ಸಂಜೆ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 ಈ ಬಗ್ಗೆ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಮೊದಲಿನ‌ ರೀತಿ ಶಾಂತಿ ಸೌಹಾರ್ದತೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

Join Whatsapp
Exit mobile version