ಶಾಲಾ ಬಸ್ ಪಲ್ಟಿ; ಓರ್ವ ವಿದ್ಯಾರ್ಥಿ ಸಾವು

ಭೋಪಾಲ್: 40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ರಾಹತ್ ಘಡ್ ನ ಚಂದ್ರಾಪುರ ಗ್ರಾಮದ ಬಳಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು 10ನೇ ತರಗತಿಯ ಶೈಲೇಂದ್ರ ಠಾಕೂರ್ ಎಂದು ಗುರುತಿಸಲಾಗಿದೆ.

- Advertisement -

ಅಪಘಾತದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಸಾಗರ್ ದೀಪಕ್ ಆರ್ಯ ಮತ್ತು ಎಸ್ ಪಿ ಸಾಗರ್ ತರುಣ್ ನಾಯಕ್ ಸ್ಥಳಕ್ಕೆ ಧಾವಿಸಿದರು.

ಒಂದು ಮಗು ಸಾವನ್ನಪ್ಪಿದ್ದು,ಇತರ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ರಾಹತ್ ಘಡ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಉಳಿದ 37 ಮಕ್ಕಳು ಸುರಕ್ಷಿತವಾಗಿದ್ದಾರೆ.

ಚಾಲಕ  ಮೊಬೈಲ್ ಫೋನ್ ಬಳಸುತ್ತಿದ್ದು, ಚಾಲಕನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ. ಎಲ್ಲಾ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದ್ದು, ತನಿಖೆಯ ನಂತರ ಸ್ಪಷ್ಟಪಡಿಸುತ್ತೇವೆ ಎಂದು ಎಸ್ಪಿ ಸಾಗರ್ ತರುಣ್ ನಾಯಕ್ ಹೇಳಿದ್ದಾರೆ.

- Advertisement -