ಬೆಂಗಳೂರು: ಇಲ್ಲಿನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ 48 ಎಫ್ಐಆರ್ಗಳು ದಾಖಲಾಗಿದೆ.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ ಐಆರ್ ಗಳು ದಾಖಲಾಗಿವೆ. ಈ ಎಲ್ಲಾ ಎಫ್ ಐಆರ್ ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.
ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿದೆ.