Home ಟಾಪ್ ಸುದ್ದಿಗಳು ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 FIR ದಾಖಲು

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 FIR ದಾಖಲು

ಬೆಂಗಳೂರು: ಇಲ್ಲಿನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ 48 ಎಫ್​ಐಆರ್​ಗಳು ದಾಖಲಾಗಿದೆ.

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ ಐಆರ್​ ಗಳು ದಾಖಲಾಗಿವೆ. ಈ ಎಲ್ಲಾ ಎಫ್​ ಐಆರ್​ ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿದೆ.

Join Whatsapp
Exit mobile version