ಶಾಲಾ ಬಾಲಕಿಯ ಕೈ ಹಿಡಿದ ಆರೋಪ; ಆಟೋ ಚಾಲಕ ಅರೆಸ್ಟ್

Prasthutha|

ಕುಶಾಲನಗರ: ಶಾಲಾ ಬಾಲಕಿಯ ಕೈ ಹಿಡಿದ ಆರೋಪದಲ್ಲಿ ಆಟೋ ಚಾಲಕನೊಬ್ಬನ್ನು ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಹೇಮಂತ್ (22) ಎಂಬಾತ ಬಂಧಿಸಲ್ಪಟ್ಟ ವ್ಯಕ್ತಿ. 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು  ಶಾಲೆಯಿಂದ ಮನೆಗೆ ತೆರಳುತ್ತಿರುವಾಗ ಮಾರ್ಗ ಮಧ್ಯೆ  ಹೇಮಂತ್  ಕೈಹಿಡಿದೆಳೆದು ಪೀಡಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ  ಬಾಲಕಿ‌ಯ ಪೋಷಕರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿ ಆತನ ವಿರುದ್ದ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ ಎಂದು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್ಐ ಚಂದ್ರಶೇಖರ್ ತಿಳಿಸಿದ್ದಾರೆ.

‘ಶಾಲಾ, ಕಾಲೇಜುಗಳ ಬಳಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಪಿಎಸ್ಐ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

Join Whatsapp