ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ (ಆ.3) ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎರಡು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಈ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.