ತರಗತಿಗಳ ಆರಂಭಕ್ಕೆ ಎಲ್ಲ ಅಗತ್ಯ ಸಿದ್ಧತೆ | ಡಾ.ಸಿ.ಎನ್.ಅಶ್ವತ್ಥನಾರಾಯಣ

Prasthutha|

ಬೆಂಗಳೂರು, ಜು.12: ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭ ಕುರಿತು ಸರಕಾರ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋವಿಡ್ ಮೂರನೇ ಅಲೆ ತಡೆಗೆ ಸರ್ಕಾರ ಎಲ್ಲ ಸಿದ್ಧತೆ ಕೈಗೊಂಡಿದೆ. ಒಂದೆಡೆ ಲಸಿಕೆ ನೀಡಿಕೆ ಕಾರ್ಯಕ್ರಮಗಳ ವೇಗ ಹೆಚ್ಚಿಸುತ್ತಲೇ, ಇನ್ನೊಂದೆಡೆ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ರಾಜ್ಯಾದ್ಯಂತ ಕೋವಿಡ್ ಸೋಂಕಿತರಿಗಾಗಿಯೇ 6 ಸಾವಿರ ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪ್ರಮಾಣಲ್ಲಿ ವೈದ್ಯರು, ನರ್ಸುಗಳು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಗ್ರೂಪ್ ಡಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 2 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

Join Whatsapp