ಇದು ಅಧಿಕೃತ | ಜ.1ರಿಂದ SSLC, ಪಿಯುಸಿ ತರಗತಿಗಳು ಆರಂಭ; 6ರಿಂದ 9ನೇ ತರಗತಿ ವರೆಗೆ ವಿದ್ಯಾಗಮ : ಸಿಎಂ

Prasthutha|

ಬೆಂಗಳೂರು : ಕೋವಿಡ್ 19 ಕಾರಣದಿಂದ ದೀರ್ಘ ಕಾಲದಿಂದ ಮುಚ್ಚಲ್ಪಟ್ಟಿದ್ದ ಶಾಲೆಗಳು ಶೀಘ್ರವೇ ತೆರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.

2021 ಜ.1ರಿಂದ SSLC ಮತ್ತು ದ್ವಿತೀಯ ಪಿಯುಸಿ ತರಗತಿ ಮತ್ತು 6ರಿಂದ 9ನೇ ತರಗತಿ ವರೆಗೆ ವಿದ್ಯಾಗಮ ಆರಂಭವಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಅವರು ಹೇಳಿದ್ದಾರೆ.

- Advertisement -