ಫೆಬ್ರವರಿ ಆರಂಭದಿಂದ ಬೆಂಗಳೂರಿನಲ್ಲಿ ಶಾಲೆ ಪುನರಾರಂಭ : ಬಿ.ಸಿ ನಾಗೇಶ್

Prasthutha|

ಮಡಿಕೇರಿ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಕಡಿಮೆ ಆಗಲಿ ಅಥವಾ ಜಾಸ್ತಿ ಆಗಲಿ ಫೆಬ್ರವರಿ ಆರಂಭದಿಂದಲೇ ಶಾಲೆ ಆರಂಭವಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುಳಿವು ನೀಡಿದ್ದಾರೆ.

- Advertisement -

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ಮಾತಾನಾಡಿದ ಅವರು, ಕಳೆದ ವಾರದ ಕೋವಿಡ್ ಸಂಬಂಧ ಸಭೆ ನಡೆಸುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದೇ 29 ರಂದು ನಡೆಯುವ ಸಭೆಯಲ್ಲಿ ಶಾಲೆಗಳ ಅರಂಭ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿದರು.

ಈಗಾಗಲೇ ಎಲ್ಲಾ ಕಡೆಗಳಲ್ಲಿ ಶಾಲೆಗಳು ಆರಂಭವಾಗಿದೆ. ಹತ್ತನೇ ತರಗತಿಯ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಲಾಗಿದೆ. ಇದೇ ರೀತಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತದೆ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ಮಾಚ್9 28 ರಿಂದ ಎಸ್‍ಎಸ್ ಎಲ್‍ಸಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ. ಕೋವಿಡ್ ನಿಯಮ ಪಾಲಿಸಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.



Join Whatsapp