Home Uncategorized ಶಾಲಾ ಪ್ರವಾಸದ ಬಸ್ ಪಲ್ಟಿ; 18 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಪ್ರವಾಸದ ಬಸ್ ಪಲ್ಟಿ; 18 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಶಿವಮೊಗ್ಗ: ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 18 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕರೂರು ಹೋಬಳಿಯ ತುಮರಿ ಗ್ರಾಮದ ವಕ್ಕೋಡಿ ಎಂಬಲ್ಲಿ ಸಂಭವಿಸಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕು ಧರ್ಮಾಪುರದ ಸರ್ಕಾರಿ ಪ್ರೌಢ ಶಾಲಾ ಮಕ್ಕಳು ಎಂದು ತಿಳಿದುಬಂದಿದೆ. ಬಸ್​ನಲ್ಲಿ 60 ಮಕ್ಕಳಿದ್ದರು ಎನ್ನಲಾಗುತ್ತಿದೆ.ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದ್ದು, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 18 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕೂಡಲೇ ಮಕ್ಕಳನ್ನು ಖಾಸಗಿ ವಾಹನ ಸೇರಿದಂತೆ, ಆಂಬ್ಯುಲೆನ್ಸ್ ಮೂಲಕ ಸಾಗರದ ಉಪ ವಿಭಾಗಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ದರ್ಮಾಪುರದ ಸರ್ಕಾರಿ ಹೈಸ್ಕೂಲಿನಿಂದ ಶಾಲಾ ಮಕ್ಕಳನ್ನು ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗುತಿತ್ತು ಎಂದು ತಿಳಿದುಬಂದಿದೆ. ಬಸ್​ನಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೆ ಬ್ಯಾಕೋಡು ಹಾಸ್ಟೆಲ್ ​ನಲ್ಲಿ ಆಶ್ರಯ ನೀಡಲಾಗಿದೆ.

Join Whatsapp
Exit mobile version