Home ಟಾಪ್ ಸುದ್ದಿಗಳು ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು: ಕಳಪೆ ಕಾಮಗಾರಿ ಆರೋಪ

ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು: ಕಳಪೆ ಕಾಮಗಾರಿ ಆರೋಪ

ರಾಮನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.

ವಿದ್ಯಾರ್ಥಿ ಕೌಶಿಕ್(12) ಮೃತ ವಿದ್ಯಾರ್ಥಿ.

6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್ ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Join Whatsapp
Exit mobile version