ಮಂಗಳೂರು | ಶಾಲಾ ಬಾಲಕಿಗೆ ಕಿರುಕುಳ ಪ್ರಕರಣ : ಶಾಲಾ ವಾಹನ ಚಾಲಕ ಪೊಲೀಸ್ ವಶ

Prasthutha|

ಮಂಗಳೂರು: ನಗರದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣ ಸಂಬಂಧ ಶಾಲಾ ವಾಹನದ ಚಾಲಕನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

- Advertisement -


ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಕ್ಷಣವೇ ಪೋಷಕರು ನಗರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.


ಬಾಲಕಿಯು ನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯಾಗಿದ್ದು, ಅದೇ ಶಾಲೆಯ ಶಾಲಾ ವಾಹನದ ಚಾಲಕನೇ ಕಿರುಕುಳ ನೀಡಿರುವ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp