Home ಟಾಪ್ ಸುದ್ದಿಗಳು ಶಾಲಾ ಕಾಲೇಜುಗಳು ಕೇಸರಿಮಯವಾಗಲಿವೆ: ಶರಣ್ ಪಂಪವೆಲ್

ಶಾಲಾ ಕಾಲೇಜುಗಳು ಕೇಸರಿಮಯವಾಗಲಿವೆ: ಶರಣ್ ಪಂಪವೆಲ್

ಮಂಗಳೂರು: ಶಾಲಾ ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಇರುವ ನಿಷೇಧವನ್ನು ರದ್ಧುಗೊಳಿಸಿದರೆ ರಾಜ್ಯದ ಶಾಲಾ ಕಾಲೇಜುಗಳು ಕೇಸರಿಮಯವಾಗಲಿವೆ ಎಂದು ವಿಹೆಚ್‌ಪಿ ಮುಖಂಡ ಶರಣ್ ಪಂಪವೆಲ್ ಹೇಳಿದ್ದಾರೆ.

ಶಾಲಾ- ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧವನ್ನು ಸರ್ಕಾರ ಹಿಂದಕ್ಕೆ ಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶರಣ್, ಮಾನ್ಯ ಮುಖ್ಯಮಂತ್ರಿಗಳೇ, ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತಾಂಧತೆಯ ವಿಷ ಬೀಜವನ್ನು ಬಿತ್ತಬೇಡಿ ಎಂದು ಹೇಳಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಮಾನತೆ ಇರಬೇಕೆಂಬ ಉದ್ದೇಶದಿಂದ ಸಮವಸ್ತ್ರ ನೀತಿ ಜಾರಿಯಲ್ಲಿದೆ. ಈ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಹಿಜಾಬ್ ನಿಷೇಧ ಮಾಡಿತ್ತು. ಈ ಕ್ರಮವನ್ನು ಹೈಕೋರ್ಟ್ ಮಾನ್ಯ ಮಾಡಿದೆ. ಸಮವಸ್ತ್ರ ನೀತಿಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version