ನಿರಂತರ ಮಳೆ ಹಿನ್ನೆಲೆ: ನಾಳೆ ಕೊಡಗು ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಮಡಿಕೇರಿ: ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜು.6) ಕೊಡಗಿನ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

ಸದ್ಯ ವರುಣನ ಆರ್ಭಟ ಮುಂದುವರಿದಿರುವುದರಿಂದ ಒಂದು ದಿನ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನೂ ಭಾರಿ ಗಾಳಿ-ಮಳೆ ಹಿನ್ನೆಲೆ ರಜೆ ನೀಡುವಂತೆ ಮಕ್ಕಳ ಪೋಷಕರು, ಸಾರ್ವಜನಿಕರು ಜಿಲ್ಲಾಡಳಿತಕ್ಕೆ  ಒತ್ತಾಯಿಸಿದರು. ಮೂರು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಮನವಿ ಪುರಸ್ಕರಿದ ಜಿಲ್ಲಾಡಳಿತ ರಜೆ ಘೋಷಿಸಿದೆ.

Join Whatsapp