ಭಾರೀ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

Prasthutha|

ಬೆಂಗಳೂರು: ನಿರಂತರ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, 2021-22ನೇ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಹಾಗೂ 1 ರಿಂದ 10ನೇ ತರಗತಿ ಎಲ್ಲಾ ಶಾಲೆಗಳನ್ನು ಕೋಡ್-19 ರ ನಂತರ ಭೌತಿಕವಾಗಿ ಪ್ರಾರಂಭಿಸಿದ್ದು, ಶಾಲೆಗಳು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತವೆ.

- Advertisement -

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಪ್ರಯುಕ್ತ ವಿದ್ಯಾರ್ಥಿಗಳು ಶಾಲೆಗೆ ಒಂದು ಹೋಗಲು ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆಯನ್ನು ಘೋಷಿಸುವ ಕುರಿತು ಅಗತ್ಯ ಕಮ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಜಾ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲು ಈ ಮೂಲಕ ತಿಳಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Join Whatsapp