ಜು.7ರಂದು ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

Prasthutha|

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ನಾಳೆ(ಜು.7) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

- Advertisement -

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.7ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp