ದ.ಕ.ಜಿಲ್ಲೆಯಲ್ಲಿ ನಾಳೆ ಶಾಲೆಗಳು ಪುನಾರಂಭ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದರೂ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಳೆದ ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸೋಮವಾರ ಕೂಡ ಮಳೆ ಮುಂದುವರಿದಿದ್ದರಿಂದ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ಮಾತ್ರ ರಜೆ ನೀಡಿ ಕಾಲೇಜು ತರಗತಿ ಆರಂಭಿಸಲಾಗಿತ್ತು. ಮಂಗಳವಾರ ರೆಡ್ ಅಲರ್ಟ್ ಇಲ್ಲದಿರುವುದರಿಂದ ಎಲ್ಲಾ ತರಗತಿಗಳನ್ನು ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ.

ಆದರೂ ಮುಂಜಾಗೃತೆ ಕೈಗೊಳ್ಳುವಂತೆ ಶಾಲಾಡಳಿತ ಮಂಡಳಿಗೆ ಸೂಚಿಸಲಾಗಿದೆ. ಒಂದು ವೇಳೆ ಯಾವುದಾದರೂ ಸಮಸ್ಯೆ ಇದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ತೀರ್ಮಾನ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Join Whatsapp