ನವದೆಹಲಿ: ಕೋವಿಡ್ ಸಾಂಕ್ರಾಮಿಕದಿಂದ 47 ಲಕ್ಷ ಭಾರತೀಯರು ಮೃತಪಟ್ಟಿದ್ದಾರೆ. ಸರ್ಕಾರ ಹೇಳಿಕೊಂಡಂತೆ ಕೇವಲ 4.8 ಲಕ್ಷ ಮಂದಿಯಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ. ಮೋದಿ ಹೇಳುತ್ತಾರೆ ಎಂದು ಕೋವಿಡ್ ಸಾವಿನ ಕುರಿತು ಡಬ್ಲ್ಯುಎಚ್ ಒ ನೀಡಿದ ಅಂಕಿಅಂಶಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ 47 ಲಕ್ಷ ಭಾರತೀಯರು ಮೃತಪಟ್ಟಿದ್ದಾರೆ. ಸರ್ಕಾರ ಹೇಳಿಕೊಂಡಂತೆ ಕೇವಲ 4.8 ಲಕ್ಷ ಮಂದಿಯಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ. ಮೋದಿ ಹೇಳುತ್ತಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. 4 ಲಕ್ಷ ಪರಿಹಾರವನ್ನು ನೀಡಿ ಅವರನ್ನು ಬೆಂಬಲಿಸಿ’ ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.
ಭಾರತದಲ್ಲಿ ಕೋವಿಡ್ನಿಂದಾಗಿ 47 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು, ಸರ್ಕಾರ ಅಧಿಕೃತವಾಗಿ ಘೋಷಿಸಿದ್ದಕ್ಕಿಂತಲೂ ಬಹುತೇಕ 10 ಪಟ್ಟು ಹೆಚ್ಚಾಗಿದೆ ಎಂದು ಬರೆದುಕೊಂಡಿದ್ದಾರೆ.