ಗಾಳಿಪಟದ ದಾರ ಸಿಲುಕಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Prasthutha|

ಬೆಂಗಳೂರು: ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಠಾತ್ ಗಾಳಿಪಟದ ಮಾಂಜಾ ದಾರ ಸಿಲುಕಿ ವ್ಯಕ್ತಿಯೊಬ್ಬರ ಕತ್ತು ಮತ್ತು ಕೈಗೆ ಗಂಭೀರ ಸ್ವರೂಪದ ಗಾಯವಾಗಿರುವ ಘಟನೆ ಬೆಂಗಳೂರಿನ ಆಡುಗೋಡಿ ಬಳಿ ನಡೆದಿದೆ.

- Advertisement -


ಗಾಯಾಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ನಿನ್ನೆ ವ್ಯಕ್ತಿಯೊಬ್ಬರು ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಕತ್ತಿಗೆ ಸಿಕ್ಕಿಹಾಕಿಕೊಂಡಿದೆ.


ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತ ಸ್ರಾವವಾಗುತ್ತಿತ್ತು. ಕತ್ತಿಗೆ ಸಿಲುಕಿದ ದಾರವನ್ನು ತಪ್ಪಿಸಲು ಕೈಯಿಂದ ದಾರ ಎಳೆದಾಗ ಕೈಗೂ ತೀವ್ರ ಸ್ವರೂಪದ ಗಾಯವಾಗಿದ್ದು, 2 ಬೆರಳುಗಳು ತುಂಡಾಗುವ ಹಂತಕ್ಕೆ ಬಂದಿವೆ. ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದಿರುವ ಘಟನೆಯ ಬಗ್ಗೆ ಗಾಯಗೊಂಡಿರುವ ವ್ಯಕ್ತಿ ವಿವರಿಸಿದ ವಿಡಿಯೋ ವೈರಲ್ ಆಗಿದೆ.

- Advertisement -


ಈ ವಿಡಿಯೋದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು ದಯವಿಟ್ಟು ಎಚ್ಚೆತ್ತುಕೊಂಡು ಗಾಳಿಪಟವನ್ನು ನಿಷೇಧ ಮಾಡಿ ಇದರಿಂದ ಮನುಷ್ಯರಿಗೂ, ಪ್ರಾಣಿ ಪಕ್ಷಿಗಳಿಗೂ ಅಪಾಯವಿದೆ. ನಾನು ಅಪಾಯದಿಂದ ಪಾರಾಗಿದ್ದೇನೆ, ಚಿಕ್ಕ ಹುಡುಗರಾಗಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು..? ಊಹಿಸಲು ಕಷ್ಟವಾಗುತ್ತದೆ. ನಾನು ಹೆಲ್ಮೆಟ್ ಧರಿಸಿ, ಸಂಚಾರ ನಿಯಮಗಳನ್ನು ಪಾಲಿಸಿಕೊಂಡೇ ಹೋಗುತ್ತಿದ್ದೆ. ಆದ್ದರಿಂದ, ಸಂಬಂಧಿಸಿದ ಅಧಿಕಾರಿಗಳು ಈ ವಿಷಯದ ಬಗ್ಗೆ ಗಮನಹರಿಸುವಂತೆ ಮನವಿ ಗಾಯಾಳು ಮನವಿ ಮಾಡಿದ್ದಾರೆ.

Join Whatsapp