ಸರನ್: ಸ್ಕಾರ್ಪಿಯೋ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಮಶ್ರಕ್ ನ ಕರ್ನ್ ಕುಡಾರಿಯಾ ಗ್ರಾಮದಲ್ಲಿ ನಡೆದಿದೆ.
ಗೋಪಾಲ್ ಗಂಜ್ ಜಿಲ್ಲೆಯ ಬೈಕುತಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬದ ಜನರು ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿವಾನ್ ನ ಬಸಂತ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಘಿ ಗ್ರಾಮಕ್ಕೆ ತೆರಳಿದ್ದರು ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ಎಲ್ಲರೂ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಗೋಪಾಲಗಂಜ್ಗೆ ತೆರಳುತ್ತಿದ್ದರು. ಆದರೆ, ಈ ವೇಳೆ ಸ್ಕಾರ್ಪಿಯೋ 15 ಅಡಿ ಆಳದ ಕಾಲುವೆಗೆ ಉರುಳಿ ಬಿದ್ದಿದೆ.
ಅಪಘಾತದ ವೇಳೆ ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಐವರು ಸಾವನ್ನಪ್ಪಿದ್ದು, ಯುವಕನೊಬ್ಬ ಹೇಗೋ ಕಾರಿನಿಂದ ಇಳಿದು ತನ್ನ ಪ್ರಾಣ ಉಳಿಸಿಕೊಂಡಿದ್ದಾರೆ.