ಜನ ವಿರೋಧಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಪಠ್ಯಕ್ರಮಗಳನ್ನು ರದ್ದುಪಡಿಸಿ: ಸಿಪಿಐಎಂ

Prasthutha|

ಬೆಂಗಳೂರು: ನಾಡಿನ ಗಣ್ಯ ಸಾಹಿತಿಗಳು, ಪ್ರಗತಿಪರರು, ಸಂಘ ಸಂಸ್ಥೆಗಳು ರಾಜ್ಯಾದ್ಯಂತ ತೀವ್ರ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದರೂ, ಕರ್ನಾಟಕ ಸರಕಾರ ನಾಚಿಕೆ ಇಲ್ಲದೇ ಪಠ್ಯ ಪುಸ್ತಕ ಪರಿಸ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣ ಪಠ್ಯ ಕ್ರಮಗಳನ್ನು ಕೈ ಬಿಡದೇ ಮುಂದುವರೆಸುತ್ತಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

- Advertisement -


ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ, ಈ ಕೂಡಲೆ ಪರಿಷ್ಕರಿಸಿದ ಪಠ್ಯ ಕ್ರಮಗಳನ್ನು, ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ, ನಾಡಿನ ಗಣ್ಯ ಮಾನ್ಯರಾದ ಡಾ. ಕುವೆಂಪು ಕುರಿತಂತೆ ಮತ್ತು ಅವರ ಬರೆದಿರುವ ʻನಾಡಗೀತೆʼಯ ಕುರಿತಂತೆ ನಿಂದನೆ ಹಾಗೂ ಅಪಮಾನ ಮಾಡುವುದೆಂದರೆ ನಾಡಿಗೆ ಅಪಮಾನ ಮಾಡಿದಂತೆ. ಇಂತಹವರನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿಸಿರುವುದು ಮತ್ತು ನಿಂದಿಸಿದವರ ಮೇಲೆ ಯಾವುದೇ ಕಾನೂನು ಕ್ರಮಗಳನ್ನು ತೆಗೆದುಕೊಳ್ಳದಿರುವುದು ರಾಜ್ಯದ ಬಿಜೆಪಿ ಪಕ್ಷದ ನಡೆಯು ಸಹ ಬೆಂಬಲ ವ್ಯಕ್ತಪಡಿಸಿರುವುದು ಪುಂಡಾಟಿಕೆಯನ್ನು ಸಮರ್ಥಿಸುವಂತಿವೆ ಎಂದು ಅವರು ಕಿಡಿಕಾರಿದ್ದಾರೆ.

Join Whatsapp