ಎರಡು ಗುಂಪುಗಳ ನಡುವೆ ಗಲಾಟೆ: ಯುವಕನ ಬರ್ಬರ ಕೊಲೆ

Prasthutha|

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಆರಂಭವಾದ ಗಲಾಟೆಯು ಯುವಕನೊಬ್ಬನ  ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ‌ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.

- Advertisement -

ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ್ (20) ಕೊಲೆಯಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ನಡೆದ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ.

ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾರೆ. ಈ ವೇಳೆ ಅರ್ಜುನಗೌಡ ಕುಸಿದು ನೆಲಕ್ಕೆ ಬೀಳುತ್ತಿದ್ದಂತೆ ಹಂತಕರು ಪರಾರಿಯಾಗಿದ್ದಾರೆ.

- Advertisement -

ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.



Join Whatsapp