ಉಜಿರೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶ್ರೇಯಾ ರೈ (ಸೌಮ್ಯ ರೈ) ಇಂದು ಕೋವಿಡ್–19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದುಬೈಯಲ್ಲಿ ವಾಸವಾಗಿದ್ದ ಶ್ರೇಯಾ ರೈ 7 ತಿಂಗಳ ಗರ್ಭಿಣಿಯಾಗಿದ್ದರು. ಕೆಲ ದಿನಗಳ ಹಿಂದೆ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ದುಬೈಯ ಖ್ಯಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಬೆಳಗ್ಗಿನ ಜಾವ ಇವರು ಮೃತಪಟ್ಟಿದ್ದಾರೆಂದು ವೈದ್ಯರು ಖಚಿತಪಡಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ಕಳಸದವರಾಗಿರುವ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ.ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದಾರೆ. ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾದ ಬಳಿಕ ಶ್ರೇಯಾ ಗಂಡನೊಂದಿಗೆ ದುಬೈಯಲ್ಲಿ ವಾಸವಾಗಿದ್ದರು.