ಪುತ್ತೂರು : ಗುಂಡಿ ನಿರ್ಮಾಣದ ವೇಳೆ ಮಣ್ಣು ಕುಸಿದು SDPI ಕಾರ್ಯಕರ್ತ ಸೇರಿದಂತೆ ಇಬ್ಬರ ದಾರುಣ ಸಾವು

Prasthutha|

- Advertisement -

ಪುತ್ತೂರು : ಆರ್ಲಪದವು ಸಮೀಪ ಕಡಮ್ಮಾಜೆಯಲ್ಲಿ ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಗೆ ಸಿಲುಕಿ SDPI ಸಕ್ರಿಯ ಕಾರ್ಯಕರ್ತ ಮತ್ತು ದಲಿತ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿರುವ ಬಾಬು ಮತ್ತು ಇನ್ನೋರ್ವ ಕಾರ್ಮಿಕ ರವಿ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ.  

ಕಡಮ್ಮಾಜೆಯ ಉದ್ಯಮಿಯೋರ್ವರಿಗೆ ಸೇರಿದ ಕೋಳಿ ಫಾರ್ಮ್ ನ ತ್ಯಾಜ್ಯ ವಿಲೇವಾರಿಗೆ ಸಂಬಂಧಪಟ್ಟಂತೆ ಜೆಸಿಬಿ ಮೂಲಕ ಹೊಂಡ ತೆಗೆಯುವ ಕೆಲಸ ನಡೆಯುತ್ತಿರುವಾಗ ಆಕಸ್ಮಿಕವಾಗಿ ಮಣ್ಣಿನಡಿಗೆ ಸಿಲುಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರಿಬ್ಬರ ಸಾವಿಗೆ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಸಂತಾಪ ವ್ಯಕ್ತಪಡಿಸಿದ್ದಾರೆ.

Join Whatsapp