ತಮಿಳುನಾಡು ವಿಧಾನಸಭಾ ಚುನಾವಣೆ : ಕಮಲ್ ಹಾಸನ್ ಅವರ MNM ಪಕ್ಷದ ಜೊತೆಗೆ SDPI ಮೈತ್ರಿ

Prasthutha: March 10, 2021

18 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ತೀರ್ಮಾನ

ಚೆನ್ನೈ : ಮುಂಬರುವ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ (MNM) ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. 

ತಮಿಳುನಾಡು ವಿಧಾನಸಭೆಯ ಒಟ್ಟು 234 ಕ್ಷೇತ್ರಗಳಲ್ಲಿ SDPI 18 ಕ್ಷೇತ್ರಗಳಲ್ಲಿ MNM ಪಕ್ಷದ ಮೈತ್ರಿಯೊಂದಿಗೆ ಸ್ಪರ್ಧಿಸಲಿದೆ ಎಂದು ಎಸ್ಡಿಪಿಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ‘ಪ್ರಸ್ತುತ’ಕ್ಕೆ ಮಾಹಿತಿ ನೀಡಿದ್ದಾರೆ. ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ ಪಕ್ಷವು 136 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎನ್ನಲಾಗಿದೆ.

MNM ಪಕ್ಷವು ಎಸ್ಡಿಪಿಐ ಸೇರಿದಂತೆ ಒಟ್ಟು ನಾಲ್ಕು ಪಕ್ಷಗಳ ಮೈತ್ರಿಕೂಟವೊಂದನ್ನು ರಚಿಸಿದ್ದು, ಅದರಲ್ಲಿ ಶರತ್ ಕುಮಾರ್ ಅವರ ಸಮತ್ವ ಮಕ್ಕಲ್ ಕಚ್ಚಿ (SMK) ಮತ್ತು ಇಂಡಿಯಾ ಜನನಾಯಗ ಕಚ್ಚಿ (IJK) ಪಕ್ಷಗಳು ಸೇರಿದೆ. ಶರತ್ ಕುಮಾರ್ ಅವರ SMK ಮತ್ತು IJK ಪಕ್ಷಗಳು ಒಟ್ಟು 40 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎನ್ನಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!