ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯ ಪುತ್ತೂರು ವಿಧಾನ ಸಭಾ ಕೇತ್ರ ಹಾಗೂ ದಲಿತ ಸಂಘರ್ಷ ಸಮಿತಿ ಪುತ್ತೂರು & ಕಡಬ (ಪ್ರೊ.ಕ್ರಷ್ಣಪ್ಪ ಸ್ಥಾಪಿತ) ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 131 ನೇ ಜನ್ಮ ದಿನದ ಪ್ರಯುಕ್ತ ಸಾಮಾಜಿಕ ನ್ಯಾಯ ದಿನ ಕಾರ್ಯಕ್ರಮವು ಇಂದು ಪುತ್ತೂರಿನ ರೋಟರಿ ಜಿ.ಎಲ್ ಸಭಾ ಭವನದಲ್ಲಿ ನಡೆಯಿತು.
ಅಂಬೇಡ್ಕರ್ರವರ ಬಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ನೈಜ ಸಾಮಾಜಿಕ ನ್ಯಾಯವನ್ನು ಪಡೆಯಲು ಹಲವಾರು ವರ್ಷಗಳಿಂದ ಹೋರಾಟ ರಂಗದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಿದ್ದು, ಈ ದೇಶದ ಮೂಲ ನಾಗರಿಕರು ಇದನ್ನು ಅರಿತು ಪ್ರತಿಯೊಬ್ಬರು ಮನು ಆಡಳಿತದ ವಂಚನೆಗೆ ಬಲಿಯಾಗದೆ ಮಾನವತಾ ಸಂವಿಧಾನದ ವಿಶಾಲ ಯೋಚನೆಗಳನ್ನು ಯೋಜನೆಗಳಾಗಿ ಕಾರ್ಯರೂಪಕ್ಕೆ ತರಲು ಕೈಜೋಡಿಸಬೇಕು ಎಂದರು.
ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಅಬ್ದುಲ್ ಮಜೀದ್ ಖಾನ್ ಮಾತಾಡಿ SDPI ಪಕ್ಷವು ಅಂಬೇಡ್ಕರ್ರವರ ಸಂವಿಧಾನದ ಆಶಯಗಳನ್ನು ದೇಶದ ಎಲ್ಲಾ ವರ್ಗದ ಜನರಿಗೆ ತಲುಪಿಸಿ ಹಸಿವು ಮತ್ತು ಭಯ ಮುಕ್ತ ಸಮಾಜ ನಿರ್ಮಿಸಲು ರಾಜಕಾರಣವನ್ನು ಕೈಗೆತ್ತಿಕೊಂಡಿದೆ ಎಂದರು.
ಎಸ್ಡಿಪಿಐ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಮಾತನಾಡಿ ಅಂಬೇಡ್ಕರ್ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಪಡಿಸದೆ ಈ ದಿನವನ್ನು ದೇಶದ ಸಾಮಾಜಿಕ ನ್ಯಾಯದ ಆಂದೋಲನವನ್ನಾಗಿ ರೂಪಿಸಬೇಕಾದ ಅನಿವಾರ್ಯತೆ ಇದೆ ಎಂದರು.
ಎಸ್ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಅದ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಸ್ಡಿಪಿಐ ಜಿಲ್ಲಾ ಸದಸ್ಯರಾದ ಗಣೇಶ್ ಗುರಿಯಾನ, ದ.ಸಂ.ಸ ಕಡಬ ತಾಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ, ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾಗೇಶ್ ಕುರಿಯ, ಚಿನ್ನು ಸವಣೂರು, ಬಾಬು ಸವಣೂರು ಮತ್ತು ಕಡಬ ತಾಲೂಕು ಮಟ್ಟದ ದ.ಸಂ.ಸದ ಕಾರ್ಯಕರ್ತರು, ಪಕ್ಷದ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಅಬ್ದುಲ್ ಹಮೀದ್ ಸಾಲ್ಮರ ಸ್ವಾಗತಿಸಿ, ರಹೀಂ ಪುತ್ತೂರು ನಿರೂಪಿಸಿದರು.