SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಹಿಳಾ ಕಾರ್ಯಕರ್ತರ ಸಭೆ

Prasthutha|

ಬಂಟ್ವಾಳ: 2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ರಾಜಕೀಯದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದಲ್ಲಿ ಮಹಿಳಾ ಕಾರ್ಯಕರ್ತರ ಸಭೆಯು ಕಲ್ಲಡ್ಕ ಬ್ಲಾಕ್ ನ ಕಾರಾಜೆ ಯಲ್ಲಿ ನಡೆಯಿತು.

- Advertisement -


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್’ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ಮಹಿಳೆಯರು ಸಬಲೀಕರಣಗೊಂಡಾಗ ಇತಿಹಾಸವನ್ನು ನಿರ್ಮಿಸಬಲ್ಲ ಶಕ್ತಿ ಇದೆ, ಮತ್ತು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯ ಬಗ್ಗೆ ವಿವರಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಹಮೀದ್ ಎಸ್ ಹೆಚ್, ಮತ್ತು ಮಹಿಳಾ ನಾಯಕಿಯರು ಕಾರ್ಯಕರ್ತರು ಉಪಸ್ಥಿತರಿದ್ದರು.

Join Whatsapp