ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ

Prasthutha|

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಪಕ್ಷದ ಕಚೇರಿ ಮುಂಭಾಗದಲ್ಲಿ “ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ” ಎಂಬ ಘೋಷ ವಾಕ್ಯದೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ನಡೆಯಿತು.

- Advertisement -


ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು ಅವರು ನೆರವೇರಿಸಿ ಸಂದೇಶ ಭಾಷಣ ಮಾಡಿದರು.


ಸಮಾರಂಭದಲ್ಲಿ ಎಸ್‌ಡಿಪಿಐ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಅಬುಬಕ್ಕರ್ ಮದ್ದ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ನವಾಝ್ ಕಟ್ಟೆ, ಸಮಿತಿ ಸದಸ್ಯರು, ಮಹಿಳಾ ಘಟಕದ ನಾಯಕಿಯರು, ಬ್ಲಾಕ್ ಸಮಿತಿ ಪದಾಧಿಕಾರಿಗಳು,ಗ್ರಾಮ ಸಮಿತಿ ಪದಾಧಿಕಾರಿಗಳು,ಸೇರಿದಂತೆ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.

- Advertisement -

ಬೆಳ್ತಂಗಡಿ ವಿಧಾನಸಭಾ ಸಮಿತಿ ಸದಸ್ಯ ನಿಝಾಮ್ ಗೇರುಕಟ್ಟೆ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು

Join Whatsapp