ಎಸ್’ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಅಭ್ಯರ್ಥಿಯ ಪೋಸ್ಟರ್ ಬಿಡುಗಡೆ

Prasthutha|

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್’ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪ್ರಚಾರ ಪೋಸ್ಟರನ್ನು ಪಕ್ಷದ ಕಚೇರಿಯಲ್ಲಿ ಬಿಡುಗಡೆ ಗೊಳಿಸಲಾಯಿತು.

- Advertisement -


ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಈ ಬಾರಿ ಬೆಳ್ತಂಗಡಿ ಜನತೆ ಅಕ್ಬರ್ ಬೆಳ್ತಂಗಡಿ ಅವರ ಕೈ ಹಿಡಿಯಲಿದ್ದಾರೆ. ಪ್ರತಿ ಬೂತ್, ಗ್ರಾಮ ಮಟ್ಟದಲ್ಲಿ ಜನರು ಭಾರಿ ಒಳವು ತೋರಿಸಿದ್ದು ಕ್ಷೇತ್ರದ ಅಭ್ಯರ್ಥಿಯ ಜಯ ಖಚಿತ ಎಂದು ಹೇಳಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿ ಅಶ್ರಫ್ ಕಟ್ಟೆ, ಕೋಶಾಧಿಕಾರಿ ಸಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಅಬ್ದುಲ್ ಅಝೀಝ್ ಝುಹರಿ, ಬ್ಲಾಕ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Join Whatsapp