ಬೆಂಗಳೂರು : ರಾಜ್ಯ ಸರಕಾರದಿಂದ ಇತ್ತೀಚೆಗೆ ಜಾರಿಗೊಂಡ ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ರಾಜ್ಯಪಾಲರಿಗೆ SDPI ಮನವಿ ಮಾಡಿದೆ. ಫೆಬ್ರವರಿ 9ರಂದು ನಡೆದ ಕರ್ನಾಟಕ ರಾಜ್ಯ ವಿಧಾನ ಪರಿಷತ್‌ನ ಕಾರ್ಯಕಲಾಪಗಳಲ್ಲಿ ಕಾನೂನು ಬಾಹಿರವಾಗಿ ಹಾಗೂ ಅನೈತಿಕವಾಗಿ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಾಗಾಟ ಪ್ರತಿಬಂಧಕ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ಇದರ ವಿರುದ್ಧ ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಂ ಅಹಮದ್, ಬೆಂಗಳೂರು ಜಿಲ್ಲಾ ಉಪಾಧ್ಯಕ್ಷರಾದ ಹೆಚ್ ಎಂ ಗಂಗಪ್ಪ ಹಾಗೂ ಬೆಂಗಳೂರು ಜಿಲ್ಲಾ ಮುಖಂಡರನ್ನೊಳಗೊಂಡ ನಿಯೋಗ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರು ಈ ಮಸೂದೆಗೆ ಅನುಮೋದನೆ ನೀಡದೆ ತಡೆಹಿಡಿಯಬೇಕೆಂದು ಮನವಿ ಮಾಡಿದ್ದಾರೆ.