Home ಟಾಪ್ ಸುದ್ದಿಗಳು ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು SDPI ಪ್ರತಿಭಟನೆ

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು SDPI ಪ್ರತಿಭಟನೆ

ಬೆಳ್ತಂಗಡಿ: ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ ನೇತೃತ್ವದಲ್ಲಿ ಶುಕ್ರವಾರ ಕಲ್ಲೇರಿ ಜಂಕ್ಷನ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ ಮಾತನಾಡಿ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಬಹಳಷ್ಟು ಅಪಘಾತಗಳು ಸಂಭವಿಸಿ, ಸಾಕಷ್ಟು ಸಾವು- ನೋವು ಸಂಭವಿಸಿದರೂ ಇನ್ನು ಈ ಕುರಿತಾಗಿ ಅಧಿಕಾರಿಗಳು ಸೂಕ್ತವಾದ ಕ್ರಮ ಕೈಗೊಂಡಿಲ್ಲ ಹಾಗೂ ಸರಿಯಾಗಿ ರಸ್ತೆ ದುರಸ್ತಿಯ ಕಾರ್ಯವೂ ನಡೆಸಿಲ್ಲ. ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ತಕ್ಷಣ ರಸ್ತೆ ದುರಸ್ಥಿಗೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕೆಂದು ಅಗ್ರಹಿಸಿದರು.

ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ವರ್ಷಗಳಿಂದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಉದಾಹರಣೆಗಳಿವೆ. ಲೋಕೋಪಯೋಗಿ ಅಧಿಕಾರಿಗಳ ಗಮನಕ್ಕೆ ತಂದರು ಏನು ಪ್ರಯೋಜನವಾಗುತ್ತಿಲ್ಲ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ಮಾತನಾಡಿ ದಿನನಿತ್ಯ ಈ ಮಾರ್ಗದಲ್ಲಿ ಶಾಲಾ- ಕಾಲೇಜು ಮಕ್ಕಳು ಓಡಾಡುತ್ತಿದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ತಣ್ಣೀರುಪಂಥ ಗ್ರಾಮ ಪಂಚಾಯತ್ ಗೆ ತೆರಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಳ ಮೂಲಕ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಪಂಚಾಯತ್ ಸದಸ್ಯರಾದ ಫೈಝಲ್ ಮೂರುಗೋಳಿ, ಅನ್ವರ್ ತೆಕ್ಕಾರು, ಬ್ಲಾಕ್ ನಾಯಕರುಗಳಾದ ನಝೀರ್ ಬಾಜಾರು, ಹನೀಫ್ ಟಿ. ಎಸ್, ಸಾದಿಕ್ ಕುದ್ರಡ್ಕ, ರಝಕ್ ಬಿ.ಎಂ, ನೌಶಾದ್ ಬಾಜಾರು, ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Join Whatsapp
Exit mobile version