Home ಟಾಪ್ ಸುದ್ದಿಗಳು ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶ ಯಶಸ್ವಿಗೊಳಿಸಲು ಎಸ್ ಡಿಪಿಐ...

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶ ಯಶಸ್ವಿಗೊಳಿಸಲು ಎಸ್ ಡಿಪಿಐ ಕರೆ

ಬೆಂಗಳೂರು: ಸಂವಿಧಾನ ವಿರೋಧಿ ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಕರೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ 27 ಸಮಿತಿಗಳ 172 ಮಂದಿ ಶಿಕ್ಷಣ ತಜ್ಞರು, ಅಧ್ಯಾಪಕರು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಒಬ್ಬ ಸಂಘಪರಿವಾರದ ಹಿನ್ನೆಲೆಯಿರುವ, ಕೋಮು ವಿಷವನ್ನು ತಲೆಯಲ್ಲಿ ತುಂಬಿಸಿಕೊಂಡಿರುವ, ಫ್ಯಾಶಿಸ್ಟ್ ಮನೋಸ್ಥಿತಿಯ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ, ಬ್ರಾಹ್ಮಣ್ಯದ ಮತ್ತು ಕೆಸರೀಕರಣದ ಅಜೆಂಡಾಗಳೊಂದಿಗೆ ಪರಿಷ್ಕರಿಸಿರುವುದು ಖಂಡನೀಯ. ಈಗಾಗಲೇ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ಹಿಂಪಡೆದು ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕಗಳನ್ನೇ ಮುಂದುವರಿಸಬೇಕೆಂಬ ಬೇಡಿಕೆಯಿಂದ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಮಾವೇಶದ ಯಶಸ್ವಿಯಲ್ಲಿ ಎಸ್.ಡಿ.ಪಿ.ಐ ಸಂಪೂರ್ಣವಾಗಿ ಕೈಜೋಡಿಸಲಿದೆ. ಎಸ್.ಡಿ.ಪಿ.ಐ ಯ ಹೆಚ್ಚಿನ ಕಾರ್ಯಕರ್ತರು, ರಾಜ್ಯ ಮತ್ತು ಜಿಲ್ಲಾ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅದೇ ರೀತಿ ಎಲ್ಲಾ ಜಾತ್ಯತೀತ ಮತ್ತು ಸಂವಿಧಾನವನ್ನು ಬಯಸುವ, ಶಿಕ್ಷಣ ಕೇಸರೀಕರಣ ಒಪ್ಪದ ಪ್ರಜ್ಞಾವಂತ ನಾಗರಿಕರು 18 ಜೂನ್ 2022 ರಂದು ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸ ಬೇಕೆಂದು ಅವರು ಮನವಿ ಮಾಡಿದ್ದಾರೆ.

Join Whatsapp
Exit mobile version