ಪುಂಜಾಲಕಟ್ಟೆಯಲ್ಲಿ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಮತ ಯಾಚನೆ

Prasthutha|

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಇಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ ಮತ ಚಲಾಯಿಸಬೇಕೆಂದು ಜನರಲ್ಲಿ ವಿನಂತಿಸಿದರು.

- Advertisement -

ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅಕ್ಬರ್, ಖಂಡಿತವಾಗಿಯೂ ಜನರು ಈ ಬಾರಿ ಎಸ್ಡಿಪಿಐಯನ್ನು ಮತ ನೀಡಿ ಗೆಲ್ಲಿಸಲಿದ್ದಾರೆ. ಈಗಿರುವ ಬಿಜೆಪಿ ಸರಕಾರ ಉತ್ತಮ ಆಡಳಿತ ಕೊಡಲು ವಿಫಲವಾಗಿದೆ. ದಿನದಿಂದ ದಿನಕ್ಕೆ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಜನ ಬೇಸತ್ತು ಹೋಗಿದ್ದಾರೆ. ಜನರು ಎಸ್ಡಿಪಿಐ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಪಕ್ಷದ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬ್ಲಾಕ್ ಅಧ್ಯಕ್ಷರಾದ ಅಶ್ಫಾಕ್ ಪುಂಜಾಲಕಟ್ಟೆ, ಸ್ವಾಲಿ ಮದ್ದಡ್ಕ, ನೌಶಾನ್ ಪಣಕಜೆ, ರೌಫ್ ಪುಂಜಾಲಕಟ್ಟೆ, ಸ್ಥಳೀಯ ಗ್ರಾಮ ಸಮಿತಿ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.