ಮೈಸೂರು: ವಿಧಾನ ಪರಿಷತ್ ಗೆ ದಕ್ಷಿಣ ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ಅಭ್ಯರ್ಥಿಯಾಗಿ ಸಮಾಜ ಸೇವಕ ರಫಾತುಲ್ಲಾ ಖಾನ್ ಸೋಮವಾರ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ಸೋಮವಾರ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಅವರ ಜೊತೆ ಆಗಮಿಸಿದ ರಫಾತುಲ್ಲಾ ಖಾನ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು.