ಬಂಟ್ವಾಳ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಗೆ ಸೋಮವಾರ ಅದ್ಧೂರಿಯ ಸ್ವಾಗತ ಕಾರ್ಯಕ್ರಮ ನಡೆಯಿತು.
ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮೂನಿಷ್ ಆಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಸಿ ರೋಡ್ ನ ತಲಪಾಡಿ ಟೋಲ್ ಗೇಟ್ ನಿಂದ ಕೈಕಂಬ ಜಂಕ್ಷನ್ ವರೆಗೆ ಸಾಗಿದ ವಾಹನ ಜಾಥಾದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮಾತಾಡಿ ” ಎಸ್ ಡಿ ಪಿ ಐ ಯಾವುದೇ ಪಕ್ಷದ ‘ಬಿ’ ಟೀಂ ಅಲ್ಲ. ಹೊರತಾಗಿ ಎಸ್ ಡಿ ಪಿ ಐ ಪಕ್ಷವು ಜನತೆಯ ಕಷ್ಟಗಳಿಗೆ ಸ್ಪಂದಿಸಿದ, ಶೋಷಿತಕ್ಕೊಳಗಾದವರ ‘ಎ’ ಟೀಂ ಆಗಿದೆ’ ಎಂದು ಹೇಳಿದರು.
ಮುಖ್ಯ ಅತಿಥಿಯಾದ ಎಸ್ ಡಿ ಪಿ ಐ ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ” ರಸ್ತೆ, ದಾರಿದೀಪ, ಚರಂಡಿಯ ಕಾರ್ಯಗಳ ಅಭಿವೃದ್ಧಿಯ ಜೊತೆಗೆ ಜನರ ನೈತಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯತ್ತ ಕೂಡ ಎಸ್ ಡಿ ಪಿ ಐ ದೂರದೃಷ್ಟಿವಿಟ್ಟಿದೆ. ಪಕ್ಷವು ನನ್ನನ್ನು ಬಂಟ್ವಾಳದ ಅಭ್ಯರ್ಥಿಯಾಗಿ ಘೋಷಿಸಿದ್ದು, ಜನರೂ ನನ್ನನ್ನು ಮೆಚ್ಚಿದ್ದಾರೆ. ಈ ಬಾರಿ ಖಂಡಿತ ಜನರು ನನಗೆ ಅವಕಾಶ ಕಲ್ಪಿಸಿ ಕೊಡುತ್ತಾರೆ’ ಎಂದು ಹೇಳಿದರು.
ಗಣ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮಾತನಾಡಿ ‘ ಈ ಬಾರಿಯ ಚುನಾವಣೆಯನ್ನು ಎಸ್ ಡಿ ಪಿ ಐ ಬಹಳ ಶಕ್ತವಾಗಿ ಎದುರಿಸಲಿದೆ. ಇಲ್ಯಾಸ್ ತುಂಬೆ ಅವರನ್ನು ಜನರು ಬೆಂಬಲಿಸುತ್ತಾರೆ. ಜನರಿಗೆ ಈ ಕಾಲದ ಆಗು ಹೋಗುಗಳು ಮನವರಿಕೆಯಾಗಿದೆ. ಪರ್ಯಾಯ ಶಕ್ತಿಯಾದ ಎಸ್ ಡಿ ಪಿ ಯನ್ನು ಮಾತ್ರ ಜನರು ಸೂಚಿಸುತ್ತಾರೆ’ ಎಂದು ಜನರನ್ನುದ್ದೇಶಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮುಲ್ಕಿ- ಮೂಡಬಿದ್ರೆ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ , ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಪಕ್ಷದ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ದ.ಕ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಕಾರ್ಯಕರ್ತರು, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ, ದ.ಕ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಇನ್ನೋರ್ವ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ದ.ಕ ಜಿಲ್ಲಾ ಸಮಿತಿ ಸದಸ್ಯರುಗಳಾದ ಯೂಸುಫ್ ಆಲಡ್ಕ, ಅಬೂಬಕ್ಕರ್ ಮದ್ದ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ, ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು, ಬಂಟ್ವಾಳ ಪುರಸಭಾ ಸದಸ್ಯರಾದ ಇದ್ರೀಸ್ ಪಿ.ಜೆ ಮತ್ತು ಇತರ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.