Home ಕರಾವಳಿ ಸನಾತನ ಸಂಸ್ಥೆಯಿಂದ ಹಿಂದೂರಾಷ್ಟ್ರ ಜಾಗೃತಿ ಸಭೆ: SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಆಕ್ರೋಶ

ಸನಾತನ ಸಂಸ್ಥೆಯಿಂದ ಹಿಂದೂರಾಷ್ಟ್ರ ಜಾಗೃತಿ ಸಭೆ: SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಆಕ್ರೋಶ

ಮಂಗಳೂರು: ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿಯಾಗಿದೆ ಎಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜಿಲ್ಲೆಯನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾರ್ಪಡಿಸಲು ಸಂಘಪರಿವಾರ ಪ್ರಯತ್ನಿಸುತ್ತಿದೆ. ಹಿಂದುತ್ವ ಅಜೆಂಡಾವನ್ನು ಜನರೆಡೆಯಲ್ಲಿ ಹರಡಿ ಸಮಾಜದಲ್ಲಿ ಗೊಂದಲ, ಹಿಂಸಾಚಾರ, ಗುಂಪು ಹತ್ಯೆ, ಮತ್ತು ದೇಶವಿರೋಧಿ ಕೃತ್ಯವೆಸಗಲು ಸಂಘಪರಿವಾರ ಷಡ್ಯಂತ್ರ ರೂಪಿಸುತ್ತಿದೆ ಎಂದು ಗುಡುಗಿದ್ದಾರೆ.


ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಸನಾತನ ಸಂಸ್ಥೆ ಮತ್ತು ಸಂಘಪರಿವಾರದ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಮುಂದೆ ನಡೆಯುವ ಅನಾಹುತಕ್ಕೆ ಪೊಲೀಸ್ ಇಲಾಖೆಯೇ ನೇರ ಹೊಣೆಯಾಗಲಿದೆ ಎಂದು ರಿಯಾಝ್ ಫರಂಗಿಪೇಟೆ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Join Whatsapp
Exit mobile version