ಉಳ್ಳಾಲ: ಯು.ಟಿ ಖಾದರ್ ಕ್ಷೇತ್ರದ ಗ್ರಾಮ ಪಂಚಾಯತ್ SDPI ತೆಕ್ಕೆಗೆ

Prasthutha|

ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಗ್ರಾಮ ಪಂಚಾಯತ್ SDPI ವಶ

- Advertisement -

ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮ ಪಂಚಾಯತ್’ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್’ಡಿಪಿಐ ಬೆಂಬಲಿತ ಅಭ್ಯರ್ಥಿ ಟಿ.ಇಸ್ಮಾಯಿಲ್ ಆಯ್ಕೆಯಾಗಿದ್ದಾರೆ.


ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ SDPI ಬೆಂಬಲಿತ 10 ಸದಸ್ಯರಿದ್ದು, ಒಬ್ಬರು ಸದ್ಯ ಮೆಕ್ಕಾ ಯಾತ್ರೆಯಲ್ಲಿದ್ದಾರೆ. ಬಿಜೆಪಿ ಬೆಂಬಲಿತ 13 ಸದಸ್ಯರಿದ್ದು, ಅದರಲ್ಲಿ ಇಬ್ಬರು ಮುಸ್ಲಿಮ್ ಸದಸ್ಯರ ಬೆಂಬಲದಿಂದ ಎಸ್ ಡಿಪಿಐ ಅಭ್ಯರ್ಥಿ 11 ಮತಗಳನ್ನು ಪಡೆದರು. ಬಿಜೆಪಿ ಅಭ್ಯರ್ಥಿ ಕೂಡ 11 ಮತಗಳನ್ನು ಪಡೆದು ಸಮಬಲ ಸಾಧಿಸಿದರು.

- Advertisement -


ಅಂತಿಮವಾಗಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರ ಆಯ್ಕೆ ನಡೆಯಿತು. ಅದೃಷ್ಟದ ಚೀಟಿ ಎತ್ತುವ ಮೂಲಕ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಎಸ್ ಡಿಪಿಐ ಅಭ್ಯರ್ಥಿ ಟಿ. ಇಸ್ಮಾಯಿಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನ ಪ್ರವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಪ್ರವರ್ಗ ಬಿ’ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯೊಬ್ಬರೇ ಇದ್ದ ಕಾರಣ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಚುನಾವಣೆ ನಡೆಯುವ ಮೊದಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.



Join Whatsapp