ಲಾಠಿಯ ಮೂಲಕ ವಿದ್ಯಾರ್ಥಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: SDPI

Prasthutha|

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಠಕ್ಕೆ ಬಿದ್ದು ಜಾರಿಗೆ ತರುತ್ತಿರುವ ಬಿಜೆಪಿ ಸರಕಾರದ ಉದ್ದೇಶ ಅಪಾಯಕಾರಿಯಾದದ್ದು ಎಂಬುದಕ್ಕೆ ವಿದ್ಯಾರ್ಥಿಗಳ ಮೇಲೆ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಲಾಠಿ ಚಾರ್ಜ್ ಸಾಕ್ಷಿ ನುಡಿಯುತ್ತಿದೆ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ತಿಳಿಸಿದ್ದಾರೆ.


ವಿದ್ಯಾರ್ಥಿಗಳು ದೇಶದ ಭವಿಷ್ಯ ರೂಪಿಸುವವರು. ಶಿಕ್ಷಣ ವ್ಯವಸ್ಥೆಗೆ ಮಾರಕವಾಗಿರುವ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಲಾಠಿಯ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ತಕ್ಷಣ CFI ವಿದ್ಯಾರ್ಥಿ ಸಂಘಟನೆ ನಾಯಕರನ್ನು ಬಿಡುಗಡೆ ಮಾಡಬೇಕು ಎಂದು ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

- Advertisement -