ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿಯರ ನಿಧನಕ್ಕೆ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂತಾಪ ಸೂಚಿಸಿದ್ದಾರೆ.

- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿಯರು ಇಹಲೋಕ ತ್ಯಜಿಸಿದ್ದಾರೆ. ಸರಡಗಿ ಅವರು ಎರಡು ಬಾರಿ ಗುಲ್ಬರ್ಗದ ಸಂಸದರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸ್ನೇಹಜೀವಿ ಸರಳ ಸಜ್ಜನಿಕೆಯ ವ್ಯಕ್ತಿತ್ವ, ಜನಪರ ಕಾಳಜಿನ್ನು ಹೊಂದಿದ್ದ ಇಕ್ಬಾಲ್ ಅಹ್ಮದ್ ಸರಡಗಿಯವರ ಅಗಲುವಿಕೆಗೆ ಸಂತಾಪ ಸೂಚಿಸುತ್ತಿದ್ದೇನೆ. ಅವರ ಪರಲೋಕ ಜೀವನ ಪಾವನವಾಗಲಿ. ಅವರ ಕುಟುಂಬಸ್ಥರು ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಸೃಷ್ಟಿಕರ್ತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಬ್ದುಲ್ ಮಜೀದ್ ಬರೆದುಕೊಂಡಿದ್ದಾರೆ.

Join Whatsapp
Exit mobile version