ವಿಧಾನ ಪರಿಷತ್ ಚುನಾವಣೆಗೆ SDPI ಸ್ಪರ್ಧೆ ?

Prasthutha|

ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸ್ಪರ್ಧಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಕನ್ನಡ ದ್ವಿಸದಸ್ಯ ಚುನಾವಣೆಗೆ SDPI ಸ್ಪರ್ಧಿಸಲು ತಯಾರಿ ನಡೆಸಿದೆ.

- Advertisement -


ಈ ಕುರಿತು ಮಾಹಿತಿ ನೀಡಿರುವ SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ, ದಕ್ಷಿಣ ಕನ್ನಡ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಯುವ ಬಗ್ಗೆ SDPI ಚಿಂತನೆ ನಡೆಸಿದೆ, ನಮ್ಮ ಬೆಂಬಲ ಕೋರಿ ಹಲವರು ಈಗಾಗಲೇ ನಮ್ಮನ್ನು ಸಂಪರ್ಕಿಸಿದ್ದಾರೆ, ಬೆಂಬಲ ಕೇಳುವುದು ಅವರ ಹಕ್ಕು, ಆದರೆ ನಾವು ಬೆಂಬಲಿಸುವ ನಿರ್ಧಾರವನ್ನು ಇನ್ನು ತೆಗೆದುಕೊಂಡಿಲ್ಲ. ಈಗಾಗಲೇ ರಾಜ್ಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಅಂತಿಮ ತೀರ್ಮಾನವನ್ನು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.


ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಎಸ್ ಡಿಪಿಐ ಜನಪ್ರತಿನಿಧಿಗಳಿದ್ದು, ಹಲವು ಪಕ್ಷೇತರ ಸದಸ್ಯರು ಕೂಡ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ ಎನ್ನಲಾಗಿದೆ.

Join Whatsapp