ಕಲ್ಲಾಪು: ಗ್ಲೋಬಲ್ ಮಾರುಕಟ್ಟೆಗೆ ಬೆಂಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಗ್ಲೋಬಲ್ ಮಾರುಕಟ್ಟೆ ಗೆ SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಭೇಟಿ ನೀಡಿದೆ.
ಈ ವೇಳೆ ಮಾತನಾಡಿದ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದವರು ತಡವಾಗಿ ಬಂದಿದ್ದಾರೆ.ಈ ವೇಳೆ 25ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ತಗುಲಿದೆ. ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಅಂಗಡಿಯನ್ನು ನಂಬಿಕೊಂಡು ಕುಟುಂಬಗಳು ಜೀವನ ನಡೆಸುತ್ತಿದೆ. ಅವರ ಬದುಕಿನ ಬಾಗಿಲು ಬಂದ್ ಆಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾಧಿಕಾರಿ ಇಲ್ಲಿಗೆ ಭೇಟಿ ನೀಡಬೇಕು. ಪರಿಹಾರವನ್ನು ಎಲ್ಲಾ ಅಂಗಡಿಯವರಿಗೆ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.