Home ಟಾಪ್ ಸುದ್ದಿಗಳು SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ

SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಬಂಟ್ವಾಳದ ಕೈಕಂಬ ಕಛೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು ರವರ ಅಧ್ಯಕ್ಷತೆ ಯಲ್ಲಿ ನಡೆಯಿತು.

ಸಭೆಗೆ ವೀಕ್ಷಕರಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು, ದೇಶವು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು, ಸರ್ವಾಧಿಕಾರಿ ಮನೋಭಾವದ ಸರಕಾರಗಳ ಜನವಿರೋಧಿ ನೀತಿಗಳಿಂದ ದೇಶದ ಜನಸಾಮಾನ್ಯರ ಬದುಕು ಶೋಚನೀಯ ಪರಿಸ್ಥಿತಿಯಲ್ಲಿದೆ , ಸರಕಾರದ ದುರಾಡಳಿತವನ್ನು ಪ್ರಶ್ನಿಸುವುದೇ ಅಪರಾಧ ಎಂಬ ಪರಿಸ್ಥಿತಿ ಇಂದು ದೇಶದಲ್ಲಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇಂತಹ ಸಂದರ್ಭದಲ್ಲಿ ನಾವು ಜನರ ಧ್ವನಿಯಾಗಿ ಜವಾಬ್ದಾರಿಯಿಂದ ನಮ್ಮ ಕರ್ತವ್ಯವನ್ನು ನಿರ್ವಹಿಸಿ ಪಕ್ಷದ ಅನಿವಾರ್ಯತೆ ಯನ್ನು ಜನತೆಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು

ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ತಯಾರಿಗಳು ಮತ್ತು ಪ್ರತೀ ಬೂತ್ ಮಟ್ಟದಲ್ಲಿ ಪಕ್ಷವನ್ನು ತಲುಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಹಾಗೂ ಇತರ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು, ಕ್ಷೇತ್ರ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಗಳು ಉಪಸ್ಥಿತರಿದ್ದರು

Join Whatsapp
Exit mobile version