ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಪ್ರತಿನಿಧಿಗಳ ಸಭೆಯು ನಾಳೆ ಆಗಸ್ಟ್ 22 ಮಂಗಳವಾರ ಅರ್ಕುಳದ ಯಶಸ್ವಿ ಹಾಲ್ ನಲ್ಲಿ ನಡೆಯಲಿದೆ.
2021-24 ರ ಅವದಿಯ ಮಧ್ಯಂತರ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ವೀಕ್ಷಕರಾಗಿ ಆಗಮಿಸಲಿದ್ದಾರೆ. ಪಕ್ಷದ ರಾಷ್ಟಿಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟಿಯ ಕಾರ್ಯದರ್ಶಿ ಅಲ್ಫಾನ್ಸ್ ಫ್ರಾಂಕೋ, ರಿಯಾಝ್ ಫರಂಗಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಅಬ್ದುಲ್ ಮಜೀದ್ ತುಂಬೆ, ಲತೀಫ್ ಪುತ್ತೂರು, ಕಾರ್ಯದರ್ಶಿ ಆನಂದ ಮಿತ್ತಬೈಲ್, ಅಶ್ರಫ್ ಮಾಚಾರ್ ಹಾಗೂ ಇತರ ರಾಜ್ಯ ಮುಖಂಡರು, ದಕ್ಷಿಣ ಕನ್ನಡ ಜಿಲ್ಲಾ ನಾಯಕರು ಹಾಗೂ ಜಿಲ್ಲಾ ಪ್ರತಿನಿಧಿಗಳು, ವಿಶೇಷ ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು SDPI ಜಿಲ್ಲಾ ಮಾಧ್ಯಮ ಸಂಯೋಜಕರಾದ ಅಬ್ದುಲ್ ಬಶೀರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.